Spread the love

ಹಾಸನ: ಏಪ್ರಿಲ್ ೭(ಹಾಯ್ ಉಡುಪಿ ನ್ಯೂಸ್) ಬಿಜೆಪಿ ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಹಾಸನದಲ್ಲಿ ಆರೋಪಿಸಿದ್ದಾರೆ.

ಇದೀಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಓಟ್ ಬ್ಯಾಂಕ್ ರಾಜಕೀಯಕ್ಕೋಸ್ಕರ ಹಿಜಾಬ್, ಹಲಾಲ್,ಝಟ್ಕಾ ಕಟ್ ವಿಷಯ ಮುಂದಿಟ್ಟುಕೊಂಡು ರಾಜ್ಯದಲ್ಲಿ ಅಶಾಂತಿಗೆ ಕಾರಣವಾಗಿದ್ದಾರೆ . ಇದೀಗ ರೈತರ ಬದುಕನ್ನು ಹಾಳು ಮಾಡಲು ಹೊರಟಿದ್ದಾರೆ.ರೈತರ ಕತ್ತು ಹಿಸುಕಿ ಸಾಯಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ.ಇದಕ್ಕೆಲ್ಲ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡುತ್ತಾರೆ ಎಂದರು.

error: No Copying!