IMG_20251011_002845.jpg
Spread the love

ದಿನಾಂಕ:11-10-2025(ಹಾಯ್ ಉಡುಪಿ ನ್ಯೂಸ್)

ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಬಲೂನ್ ಮಾರಲು ಬಂಧಿದ್ದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಗುರುವಾರ ಬೆಳಿಗ್ಗೆ ಬಾಲಕಿಯೊಬ್ಬಳ ಮೃತದೇಹ ವಸ್ತುಪ್ರದರ್ಶನ ಮೈದಾನದಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ಪರಿಶೀಲಿಸಿದ ಪೊಲೀಸರಿಗೆ ಮೈಸೂರಿನ ಸಿದ್ಧಲಿಂಗಪುರದ ಕಾರ್ತಿಕ್ ಎಂಬಾತನ ಮೇಲೆ ಅನುಮಾನ ಬಂದಿತ್ತು. ಹೀಗಾಗಿ ಆತನನ್ನು ವಶಕ್ಕೆ ಪಡೆಯಲು ಮುಂದಾದಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಕಾರ್ತಿಕ್ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌ಸಿ ಮಹದೇವಪ್ಪ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಬಾಲಕಿ ಅತ್ಯಾಚಾರ ಕೊಲೆ ಅತ್ಯಂತ ಹೀನ ಕೃತ್ಯವಾಗಿದೆ. ಆದರೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ಈಮಧ್ಯೆ, ರೌಡಿ ಶೀಟರ್ ಗಿಲ್ಕಿ ವೆಂಕಟೇಶ್ ಕೊಲೆ, ಬಾಲಕಿಯ ಅತ್ಯಾಚಾರ ಕೊಲೆ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನಾಳೆ ಹಿರಿಯ ಅಧಿಕಾರಿಗಳ ಜೊತೆ ಮೈಸೂರಲ್ಲಿ ಸಭೆ ನಡೆಸಲಿದ್ದಾರೆ.

error: No Copying!