IMG_20251016_180514.jpg
Spread the love

ಮಣಿಪಾಲ: ದಿನಾಂಕ 16/10/2025 (ಹಾಯ್ ಉಡುಪಿ ನ್ಯೂಸ್) ಹೆರ್ಗ ಗ್ರಾಮದ ಶ್ರೀ ಬಬ್ಬು ಸ್ವಾಮಿ ದೇವಸ್ಥಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನಿಲ್ ಬಿ ಎಂ ಅವರು ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನೀಲ್‌ ಬಿ ಎಂ ಅವರು ದಿನಾಂಕ :15-10-2025 ರಂದು ಸಿಬ್ಬಂದಿಗಳೊಂದಿಗೆ ಹೆರ್ಗ ಗ್ರಾಮದ ಈಶ್ವರನಗರದ ಬಳಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಹೆರ್ಗ ಗ್ರಾಮದ ಶ್ರೀ ಬಬ್ಬುಸ್ವಾಮೀ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಹಣವನ್ನು ಪಣವಾಗಿ ಪಡೆದು ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಸಾರ್ವಜನಿಕ ರಿಂದ ಮಾಹಿತಿ ಬಂದ ಮೇರೆಗೆ ಕೂಡಲೇ ದಾಳಿ ನಡೆಸಿದ್ದು  ಸ್ಥಳದಲ್ಲಿ ಮಟ್ಕಾ ಜುಗಾರಿ ಆಡುತ್ತಿದ್ದ ಸಾರ್ವಜನಿಕರು ಓಡಿ ಹೋಗಿದ್ದು, ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಹಿಡಿದು ವಿಚಾರಣೆ ನಡೆಸಿದಾಗ ತನ್ನ ಹೆಸರು ಎಸ್‌ ಶಿವಶಂಕರ (43),ಶಾಂಭವಿ ಹೊಟೆಲ್‌ ಹತ್ತಿರ ಆತ್ರಾಡಿ ಗ್ರಾಮ ಎಂದು ತಿಳಿಸಿದ್ದಾನೆ ಎನ್ನಲಾಗಿದೆ.

ಪೊಲೀಸರು ಆರೋಪಿಯನ್ನು ಬಂಧಿಸಿ ನಂತರ ಆತನನ್ನು ತಪಾಸಣೆ  ನಡೆಸಿದಾಗ ಸಾರ್ವಜನಿಕರಿಂದ ಸಂಗ್ರಹಿಸಿದ 1050/- ರೂಪಾಯಿ ನಗದು ಹಣ, ಮಟ್ಕಾ ನಂಬ್ರ ಬರೆದ ಚೀಟಿ-1, ಬಾಲ್‌ಪೆನ್ನು-1 ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿತ ಶಿವಶಂಕರ ನು ವ್ಯವಸ್ಥಿತವಾಗಿ ಸಂಘಟಿತನಾಗಿ ತನ್ನ ಸ್ವಂತ ಲಾಭಕ್ಕೋಸ್ಕರ ಹಣವನ್ನು ಪಣವಾಗಿ ಪಡೆದು ಮಟ್ಕಾ ಜುಗಾರಿ ಆಟ ಆಡಿಸುತ್ತಿದ್ದಾನೆ ಎಂದು ಪೊಲೀಸರು ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಕಲಂ: 78 (i)(iii) ಕರ್ನಾಟಕ ಪೊಲೀಸ್‌ ಕಾಯ್ದೆ ಮತ್ತು ಕಲಂ:112 ಭಾರತೀಯ ನ್ಯಾಯ ಸಂಹಿತೆ ಯಂತೆ ಪ್ರಕರಣ ದಾಖಲಾಗಿದೆ.

error: No Copying!