ದಿನಾಂಕ:19-10-2025(ಹಾಯ್ ಉಡುಪಿ ನ್ಯೂಸ್)
ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, 2013ರಲ್ಲಿ ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗಲೇ ಈ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ಜಾರಿಗೊಳಿಸಿದ್ದೇವೆ, ಆಗ ವಿರೋಧ ಮಾಡದವರು ಈಗ ಯಾಕೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಿಜೆಪಿಯವರಿಗೆ ರಾಜಕಾರಣ ಬಿಟ್ಟರೆ ಬೇರೇನೂ ಮಾಡಲು ಬರುವುದಿಲ್ಲ, ಈ ವಿಷಯದಲ್ಲಿ ಬಿಜೆಪಿ ಖಂಡಿತವಾಗಿಯೂ ರಾಜಕೀಯ ಮಾಡುತ್ತಿದೆ. ಜನರ ಬಡವರ ಪರ ಅವರು ಕೆಲಸ ಮಾಡುವುದಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
