ಕೋಟ: ದಿನಾಂಕ: 19.10.2025 (ಹಾಯ್ ಉಡುಪಿ ನ್ಯೂಸ್) ಬಡಾಬೆಟ್ಟು ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ದಂಧೆ ನಡೆಸುತ್ತಿದ್ದ ಯುವಕನನ್ನು ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಅವರು ಬಂಧಿಸಿದ್ದಾರೆ.
ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಅವರು ದಿನಾಂಕ:18-10-2025 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಕುಂದಾಪುರ ತಾಲೂಕು ಬೇಳೂರು ಗ್ರಾಮದ ಬಡಾಬೆಟ್ಟು ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಡುತ್ತಿರುವುದಾಗಿ ಬಂದ ಖಚಿತ ಗುಪ್ತ ಮಾಹಿತಿ ಮೇರೆಗೆ ಕೂಡಲೇ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಮಾಹಿತಿ ಬಂದ ಸ್ಥಳದಲ್ಲಿ ಸಾರ್ವಜನಿಕರು ಗುಂಪು ಸೇರಿದ್ದು ಓರ್ವ ವ್ಯಕ್ತಿ 1 ರೂಪಾಯಿಗೆ 70 ರೂಪಾಯಿ ಎಂದು ಜೋರಾಗಿ ಕೂಗುತ್ತಿದ್ದು ಸಂಖ್ಯೆಗಳ ಮೇಲೆ ಸಾರ್ವಜನಿಕರು ಹಣವನ್ನು ಪಣವಾಗಿ ಕಟ್ಟುತ್ತಿದ್ದು ಅವರುಗಳು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟದಲ್ಲಿ ನಿರತರಾಗಿದ್ದು ಪೊಲೀಸರು ದಾಳಿ ನಡೆಸಿದಾಗ ಉಳಿದವರು ಓಡಿ ಹೋಗಿದ್ದು ಕಾರ್ತಿಕ್ (26) ಬೇಳೂರು ಗ್ರಾಮ, ಕುಂದಾಪುರ ತಾಲೂಕು ಎಂಬವನನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಾರ್ತಿಕ ನು ತನ್ನ ಸ್ವಂತ ಲಾಭಕ್ಕೋಸ್ಕರ ಆಡುತ್ತಿದುದಾಗಿ ತಪ್ಪೊಪ್ಪಿಕೊಂಡಿದ್ದು ಆತನ ಪ್ಯಾಂಟ್ ಕಿಸೆಯಲ್ಲಿದ್ದ ಜುಗಾರಿ ಆಟಕ್ಕೆ ಬಳಸಿದ ಮಟ್ಕಾ ಚೀಟಿ , ಬಾಲ್ ಪೇನ್ ಹಾಗೂ ನಗದು 1050/- ರೂಪಾಯಿಯ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಕಲಂ: & 78 (1) (111) KP Act ರಂತೆ ಪ್ರಕರಣ ದಾಖಲಾಗಿದೆ.
