images-6.jpeg
Spread the love

ದಿನಾಂಕ:21-10-2025(ಹಾಯ್ ಉಡುಪಿ ನ್ಯೂಸ್)

ಬೆಂಗಳೂರು: ಬಿಹಾರ ಚುನಾವಣೆಗಾಗಿ ಕರ್ನಾಟಕದಲ್ಲಿ ಸಚಿವರು ಅಧಿಕಾರಿಗಳಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಬಿಜೆಪಿಯನ್ನು ಟೀಕಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಸಂಪನ್ಮೂಲಗಳನ್ನು ‘ಹೈಕಮಾಂಡ್‌ಗೆ ತಿರುಗಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ’ ‘ಕಾಂಗ್ರೆಸ್‌ಗೆ ಅಲ್ಲ’ ಎಂದು ಮಂಗಳವಾರ ಹೇಳಿದ್ದಾರೆ.

‘ಎಕ್ಸ್’ನಲ್ಲಿ  ಪೋಸ್ಟ್ ಹಂಚಿಕೊಂಡಿರುವ ಖರ್ಗೆ, ‘ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನು ಯಡಿಯೂರಪ್ಪನವರು ಹಾಗೂ ದಿವಂಗತ ಅನಂತ್ ಕುಮಾರ್ ಅವರ ಸಂಭಾಷಣೆಯಲ್ಲಿ ಬಹಿರಂಗವಾಗಿದ್ದನ್ನು ಬಿಜೆಪಿ ನಾಯಕರು ಮರೆತಿದ್ದಾರೆಯೇ? ಮರೆತಿದ್ದರೆ, ನಾವು ಮತ್ತೊಮ್ಮೆ ನೆನಪಿಸುತ್ತಿದ್ದೇವೆ’ ಎಂದಿದ್ದಾರೆ.

ಸಂಸದ ಬಿವೈ ರಾಘವೇಂದ್ರ ಅವರು ತಮ್ಮ ಪೂಜ್ಯ ತಂದೆಯವರ ಮಾತುಗಳನ್ನು ಒಮ್ಮೆ ಕಿವಿಗೊಟ್ಟು ಕೇಳಿಸಿಕೊಂಡು ನಂತರ ಮಾತನಾಡಿದರೆ ಉತ್ತಮ ಎಂದು ಬರೆದಿದ್ದಾರೆ.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ₹2,500 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ, ಮಂತ್ರಿಗಿರಿಗೆ 60, 70 ಕೋಟಿ ಕೊಡಬೇಕು ಎಂದಿದ್ದವರೂ ಬಿಜೆಪಿಯವರೇ. ಬಿಜೆಪಿ ಹೈಕಮಾಂಡ್ ಹುದ್ದೆಗಳನ್ನು ಮಾರಾಟಕ್ಕಿಟ್ಟು ವ್ಯಾಪಾರಕ್ಕೆ ಕುಳಿತಿತ್ತು ಎನ್ನುವುದನ್ನು ಬಿಜೆಪಿಯವರೇ ಬಹಿರಂಗಪಡಿಸಿದ್ದರು ಎಂದಿದ್ದಾರೆ.

ಕರ್ನಾಟಕದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾಡಿದ ಕೀರ್ತಿ ಬಿಜೆಪಿಯದ್ದೇ ಹೊರತು ಕಾಂಗ್ರೆಸ್ಸಿನದ್ದಲ್ಲ ಎಂದು ಕಿಡಿಕಾರಿದ್ದಾರೆ.

ಸೋಮವಾರ ಕೇಂದ್ರ ಸರ್ಕಾರವನ್ನು ಟೀಕಿಸಿದ ಖರ್ಗೆ, ಪ್ರವಾಹ ಪರಿಹಾರ ನಿಧಿ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

error: No Copying!