ಮಣಿಪಾಲ: ದಿನಾಂಕ 22/10/2025 (ಹಾಯ್ ಉಡುಪಿ ನ್ಯೂಸ್) ನಗರದ ಸೆಲೂನ್ & ಸ್ಪಾ ಬಾಡಿ ಮಸಾಜ್ ಸೆಂಟರ್ ಒಂದರಲ್ಲಿ ಮಹಿಳೆಯರನ್ನು ಅಕ್ರಮವಾಗಿ ಕೂಡಿಟ್ಟು ಕೊಂಡು ಮಸಾಜ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಣಿಪಾಲದ ನಾಲ್ವರು ಪಿಂಪ್ ಗಳನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾದ ಮಹೇಶ್ ಪ್ರಸಾದ್ ಅವರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಅವರಿಗೆ ದಿನಾಂಕ:21-10-2025 ರಂದು ಮಣಿಪಾಲದಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ಅಕ್ರಮ ಲಾಭಕ್ಕಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಬಂದ ಮಾಹಿತಿ ಮೇರೆಗೆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ದಾಳಿ ಮಾಡಿದ್ದಾರೆ .
ದಾಳಿ ಮಾಡಿದಾಗ ಅಲ್ಲಿ ಇದ್ದ ನೊಂದ ಮಹಿಳೆಯರನ್ನು ರಕ್ಷಿಸಿ, ಆರೋಪಿತರುಗಳಾದ ಇಮ್ರಾನ್ ಹಾಗೂ ಜೈಬಾಯ್ ಅಲಿಯಾಸ್ ಎಲಿಸಾ ಎಂಬುವವರನ್ನು ಬಂಧಿಸಿ ವಶಕ್ಕೆ ಪಡೆದುಕೊಂಡು ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಪಿಗಳಾದ ಮಹೇಶ್ ಹಾಗೂ ಅಶೋಕ್ ತಮ್ಮ ಸ್ವಂತ ಲಾಭಕ್ಕಾಗಿ ಅಕ್ರಮವಾಗಿ ಹಣಗಳಿಸುವ ಉದ್ದೇಶದಿಂದ ಸೆಲೂನ್ & ಸ್ಪಾ ಬಾಡಿ ಮಸಾಜ್ ಸೆಂಟರ್ ಇಟ್ಟುಕೊಂಡಿರುವುದು ಪೊಲೀಸ್ ತನಿಖೆಯಲ್ಲಿ ಕಂಡು ಬಂದಿದ್ದು ಆರೋಪಿತರುಗಳಾದ ಇಮ್ರಾನ್ ಹಾಗೂ ಜೈಬಾಯ್ ಅಲಿಯಾಸ್ ಎಲಿಸಾ ಅವರೊಂದಿಗೆ ಸೇರಿಕೊಂಡು ಅವರ ವ್ಯವಹಾರಕ್ಕೆ ಸಹಕರಿಸುತ್ತಿರುವುದು ತಿಳಿದು ಬಂದಿದೆ ಎಂದು ಪೊಲೀಸರು ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ: 143 BNS & 3,4,5,6 ITP Act ರಂತೆ ಪ್ರಕರಣ ದಾಖಲಾಗಿದೆ.
