ಕುಂದಾಪುರ: ದಿನಾಂಕ 27/10/2025 (ಹಾಯ್ ಉಡುಪಿ ನ್ಯೂಸ್)ಕಾವ್ರಾಡಿ ಗ್ರಾಮದ ಹಾಡಿ ಯೊಂದರಲ್ಲಿ ನಡೆಯುತ್ತಿದ್ದ ಅಂದರ್ ಬಾಹರ್ ಜುಗಾರಿ ಅಡ್ಡೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನಾಸಿರ್ ಹುಸೇನ್ ಅವರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ನಾಸಿರ್ ಹುಸೇನ್ ಅವರಿಗೆ ದಿನಾಂಕ :26-10-2025 ರಂದು ಇಸ್ಪೀಟು ಜುಗಾರಿ ಆಟದ ಬಗ್ಗೆ ದೊರೆತ ಸಾರ್ವಜನಿಕ ಮಾಹಿತಿ ಮೇರೆಗೆ ಕಾವ್ರಾಡಿ ಗ್ರಾಮದ ಮರಾಸಿ ರಸ್ತೆಯಲ್ಲಿ ಹಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣವನ್ನು ಪಣವಾಗಿಟ್ಟು ಅಂದರ್ – ಬಾಹರ್ ಎಂಬ ಇಸ್ಪೀಟು ಆಟವಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಇಸ್ಪೀಟ್ ಜುಗಾರಿ ಆಡುತ್ತಿದ್ದ 1) ಅನಿಲ್ (31),ದೇವಲ್ಕುಂದ ಗ್ರಾಮ ಕುಂದಾಪುರ, 2) ಪೂರ್ಣೇಶ (25), ದೇವಲ್ಕುಂದ ಗ್ರಾಮ ಕುಂದಾಪುರ, 3) ರಘು (39),ಕೆಂಚನೂರು ಗ್ರಾಮ, ಕುಂದಾಪುರ, 4) ಯೋಗೀಶ (39), ದೇವಲ್ಕುಂದ ಗ್ರಾಮ, ಕುಂದಾಪುರ ಎಂಬವರನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳು ಇಸ್ಪೀಟ್ ಜುಗಾರಿ ಆಟಕ್ಕೆ ಬಳಸಿದ್ದ ಪ್ಲಾಸ್ಟಿಕ್ ಶೀಟ್ ಮೇಲೆ ಇದ್ದ ಒಟ್ಟು 2,480/- ರೂಪಾಯಿ, ನೀಲಿ ಬಣ್ಣದ ಪ್ಲಾಸ್ಟಿಕ್ -1, ಇಸ್ಪೀಟ್ ಎಲೆಗಳು, ಬಿಳಿ ಬಣ್ಣದ ಪ್ಲಾಸ್ಟಿಕ್ ಚೀಲ, ಮೊಬೈಲ್-2 ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 87 KP Act ರಂತೆ ಪ್ರಕರಣ ದಾಖಲಾಗಿದೆ.
