ಹೆಬ್ರಿ: ದಿನಾಂಕ : 28/10/2025 (ಹಾಯ್ ಉಡುಪಿ ನ್ಯೂಸ್) ವಿಜಯಲಕ್ಷ್ಮಿ ಬಾರ್ ಎದುರಿನ ಸಾರ್ವಜನಿಕ ರಸ್ತೆ ಬದಿ ಯಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರೀತಂ ಕುಮಾರ್ ಪಯಾಸ್ ಅವರು ಬಂಧಿಸಿದ್ದಾರೆ.
ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರೀತಂಕುಮಾರ್ ಪಯಾಸ್ ಅವರಿಗೆ ದಿನಾಂಕ:27-10-2025ರಂದು ಹೆಬ್ರಿ ಗ್ರಾಮದ ವಿಜಯಲಕ್ಮೀ ಬಾರ್ ಎಂಡ್ ರೆಸ್ಟೊರೆಂಟ್ ಮತ್ತು ಲಾಡ್ಞ್ ಎದುರು ರಸ್ತೆಯ ಬದಿಯಲ್ಲಿ ಓರ್ವ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಎಂಬ ಅಟ ಆಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಜುಗಾರಿ ಆಟ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.
ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತನ ಹೆಸರು ಚೇತನ (24),ಪುತ್ತೂರು ಗ್ರಾಮ, ಉಡುಪಿ ಎಂದು ತಿಳಿಸಿದ್ದು ಆತನ ಬಳಿ ಇದ್ದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು 880/- ರೂಪಾಯಿ ಹಾಗೂ ಮಟ್ಕಾ ನಂಬ್ರ ಬರೆದ ಚೀಟಿ ಹಾಗೂ ಬಾಲ್ ಪೆನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕಲಂ: 78(1)(3) KP ACT ರಂತೆ ಪ್ರಕರಣ ದಾಖಲಾಗಿದೆ.
