ದಿನಾಂಕ:01-11-2025(ಹಾಯ್ ಉಡುಪಿ ನ್ಯೂಸ್)
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಪಥಸಂಚಲನದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವದ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ,ನಾಯಕರು ಉಪಸ್ಥಿತರಿದ್ದರು.
