ದಿನಾಂಕ:01-11-2025(ಹಾಯ್ ಉಡುಪಿ ನ್ಯೂಸ್)
70ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಾತೃಭಾಷೆಯಲ್ಲೇ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತರುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಲು ಹೊಸ ನೀತಿಯನ್ನು ತರುವ ಘೋಷಣೆಯನ್ನು ಮಾಡಿದ್ದಾರೆ. ಕೇಂದ್ರ ಸರ್ಕಾರವು ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನು ತೋರುತ್ತಿದೆ. 4.5 ಲಕ್ಷ ಕೋಟಿ ರೂಪಾಯಿಗಳಿಂತ ಹೆಚ್ಚಿನ ತೆರಿಗೆ ಸಂಪತ್ತನ್ನು ಕರ್ನಾಟಕವು ನೀಡುತ್ತಿದೆ. ಆದರೆ ಹಿಂದಿ, ಸಂಸ್ಕೃತ ಭಾಷೆಗಳ ಅಭಿವೃದ್ಧಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ. ಕನ್ನಡವೂ ಸೇರಿದಂತೆ ಉಳಿದ ದೇಶ ಭಾಷೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದರು.
