IMG-20241220-WA00051.jpg
Spread the love

ನಮ್ಮ ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನದ ಬಗ್ಗೆ  ಸನ್ಮಾನ್ಯ ರಾಹುಲ್ ಗಾಂಧಿ ಅವರು ಸಂಪೂರ್ಣ ಸಾಕ್ಷಿ ನೀಡಿದ್ದಾರೆ. ಇದರಿಂದ ಬಿಜೆಪಿ ಹಾಗೂ ಚುನಾವಣಾ ಆಯೋಗ ಕಂಗಾಲಾಗಿದೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

ಇಡೀ ದೇಶದಲ್ಲಿ ಚುನಾವಣೆಯಲ್ಲಿ ಅಧಿಕಾರವನ್ನು ಪಡೆಯುವುದಕ್ಕಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕೇವಲ ಅಧಿಕಾರಕ್ಕಾಗಿ ಮತದಾರರ ಪಟ್ಟಿಯನ್ನೇ ಚುನಾವಣಾ ಆಯೋಗದ ಬೆಂಬಲದೊಂದಿಗೆ ಮತಗಳ್ಳತನ ನಡೆಸಿರುವುದರ ಬಗ್ಗೆ ಸಾಕ್ಷಿ ಸಮೇತ ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ನಮ್ಮ ಭಾರತ ದೇಶದ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ರಾಹುಲ್ ಗಾಂಧಿ ಅವರು ಸವಿಸ್ತಾರವಾಗಿ ಈ ಬಿಜೆಪಿ ಹಾಗೂ ಚುನಾವಣಾ ಆಯೋಗದ ಮೈತ್ರಿಯ ಬಗ್ಗೆ ಸಾಕ್ಷಿ ಸಮೇತ ದಾಖಲೆ ನೀಡಿದ್ದು. ಬಿಜೆಪಿಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಕಂಗಾಲಾಗಿ ಮನಬಂದಂತೆ ಮಾತನಾಡುತ್ತಿದ್ದಾರೆ . ಇವರು ಮೋಸದಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂಬುದು ಇವರಿಗೆ ಖಚಿತವಾಗಿದ್ದು ಜನರನ್ನು ಮೋಸಗೊಳಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ ಈ ಬಿಜೆಪಿ ಹಾಗೂ ಚುನಾವಣಾ ಆಯೋಗದ ಕಳ್ಳತನ ಇಡೀ ದೇಶದ ಜನಸಾಮಾನ್ಯರಿಗೆ ತಿಳಿದಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರವನ್ನು ನಮ್ಮ ದೇಶದ ಜನತೆಯೇ ನೀಡಲಿದ್ದಾರೆ . ಅದೇ ರೀತಿಯಲ್ಲಿ ರಾಹುಲ್ ಗಾಂಧಿಯವರ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯ ಛಲವಾದಿ ನಾರಾಯಣರಿಗೆ ಇದೆಯಾ ಎಂಬುದನ್ನು ಅವರೇ ಅರ್ಥೈಸಿ ಕೊಳ್ಳಬೇಕು .ಅವರು ನೀಡಿದಂತಹ ಹೇಳಿಕೆಯ ಬಗ್ಗೆ ಕೇಸನ್ನು ದಾಖಲಿಸಲು ನಮ್ಮ ನಾಯಕರ ಬಳಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಉಡುಪಿ ನಗರಸಭಾ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿರುತ್ತಾರೆ.

error: No Copying!