ಶಿರ್ವಾ: ದಿನಾಂಕ: 12-11-2025(ಹಾಯ್ ಉಡುಪಿ ನ್ಯೂಸ್) ಇರ್ಮಿಂಜ ಚರ್ಚ್ ಸಮೀಪದ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರು ವ್ಯಕ್ತಿಗಳನ್ನು ಶಿರ್ವ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ ಮರಬದ ಅವರು ಬಂಧಿಸಿದ್ದಾರೆ.
ಶಿರ್ವ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ ಮರಬದ ಅವರು ದಿನಾಂಕ 09/11/2025 ರಂದು ಠಾಣೆಯ ಸಿಬ್ಬಂದಿಗಳೊಂದಿಗೆ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ರಾತ್ರಿ 11:30 ಗಂಟೆಗೆ ಕಾಪು ತಾಲೂಕು ಶಿರ್ವ ಗ್ರಾಮದ ಇರ್ಮಿಂಜ ಚರ್ಚ್ ಸಮೀಪ ಹಾದು ಹೋಗಿರುವ ಸಾರ್ವಜನಿಕ ರಸ್ತೆಯ ಬಳಿ ಬೀದಿ ದೀಪದ ಕೆಳಗೆ ನೆಲದಲ್ಲಿ ಕುಳಿತು ಹಣವನ್ನು ಪಣವಾಗಿ ಇಡುತ್ತಾ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿ ಅಲ್ಲಿ ಇಸ್ಪೀಟ್ ಜುಗಾರಿ ಆಟ ಆಡುತ್ತಿದ್ದ 1) ನಿಂಗಪ್ಪ ಗಡ್ಡದವರ (37), 2) ನಿಂಗಪ್ಪ ಅಂಬಿಗೇರ (23), 3) ರಾಘವೇಂದ್ರ ಸಣ್ಣತಂಗೇರ (28) ಎಂಬವರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಇಸ್ಪೀಟ್ ಜುಗಾರಿ ಆಟಕ್ಕೆ ಉಪಯೋಗಿಸಿದ ಇಸ್ಪೀಟ್ ಎಲೆಗಳು – 52, ನಗದು ರೂ. 1,900/- ಒಂದು ಹಳೆಯ ದಿನ ಪತ್ರಿಕೆ ಯನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಕಲಂ: 87 KP ACT ರಂತೆ ಪ್ರಕರಣ ದಾಖಲಾಗಿದೆ.
