ಉಡುಪಿ : ದಿನಾಂಕ:23-11-2025(ಹಾಯ್ ಉಡುಪಿ ನ್ಯೂಸ್) ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025ರ ಸಮಾರೋಪ ಸಮಾರಂಭ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆಯಿತು,
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ, ಶ್ರೀ ಅಮಿತ್ ಸಿಂಗ್ ಐಪಿಎಸ್ ಪೊಲೀಸ್ ಮಹಾನಿರೀಕ್ಷಕರು ಪಶ್ಚಿಮ ವಲಯ ಮಂಗಳೂರು ,ಶ್ರೀ ಪ್ರತೀಕ್ ಬಾಯಲ್ ಐಎಎಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಡುಪಿ ಜಿಲ್ಲಾ ಪಂಚಾಯತ್, ರವರು ಆಗಮಿಸಿದ್ದರು. ಶ್ರೀ ಹರಿರಾಮ್ ಶಂಕರ್ ಐಪಿಎಸ್, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಶ್ರೀ ಸುಧಾಕರ್ ನಾಯ್ಕ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಾಗೂ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು, ವಿಜೇತ ಸ್ಪರ್ಧಾಳುಗಳಿಗೆ ಬಹುಮಾನವನ್ನು ವಿತರಿಸಲಾಯಿತು.

