ದಿನಾಂಕ:27-11-2025(ಹಾಯ್ ಉಡುಪಿ ನ್ಯೂಸ್)
ಮಣಿಪಾಲ: ಉಡುಪಿ , ಮಣಿಪಾಲದ ಡೆಲ್ಲಿ ಡಾಬಾ ದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಘಟನೆ ಇಂದು ಸಂಭವಿಸಿದೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಿಚಾರಗಳು ಕಂಡುಬಂದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
ಡಾಬಾದ ಒಳಭಾಗದಲ್ಲಿದ್ದ ಸಿಲಿಂಡರ್‌ಗಳು ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಸ್ಫೋಟಗೊಂಡಿದ್ದರೂ, ಅದೃಷ್ಟವಶಾತ್ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಸ್ಥಳದಲ್ಲಿ ಅಗ್ನಿ ನಂದಿಸುವ ಕಾರ್ಯ ಕೂಡ ತಕ್ಷಣ ಕೈಗೊಳ್ಳಲಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಹರಿರಾಂ ಶಂಕರ್ ಅವರು ಘಟನೆಯ ಬಗ್ಗೆ ಸುಳ್ಳು ಸುದ್ದಿ ಅಥವಾ ವದಂತಿ ಹರಡುವ ಅಗತ್ಯವಿಲ್ಲ. ಯಾವುದೇ ಅನುಮಾನಾಸ್ಪದ ಅಂಶ ಕಂಡುಬಂದಿಲ್ಲ. ಸಾರ್ವಜನಿಕರು ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಹೇಳಿದ್ದಾರೆ.

