ಕಾಪು: ದಿನಾಂಕ:30-11-2025(ಹಾಯ್ ಉಡುಪಿ ನ್ಯೂಸ್) ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಐವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ನಡೆದಿದೆ.
ಕಾಪು ಮಜೂರಿನಿಂದ ಉಡುಪಿ ಮಲ್ಪೆಗೆ ಡೆಕರೇಷನ್ ಸಲಕರಣೆ ಗಳನ್ನು ಸಾಗಿಸುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯಲ್ಲಿ ಪಲ್ಟಿಯಾಗಿ ಬಿತ್ತೆನ್ನಲಾಗಿದೆ. ವಾಹನದಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಇದ್ದು, ಅವರಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಇವರ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಹಾಗೂ ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
