IMG_20251202_213723.jpg
Spread the love

ದಿನಾಂಕ:02-12-2025(ಹಾಯ್ ಉಡುಪಿ ನ್ಯೂಸ್)

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಸದ್ಯ ವಿರಾಮ ದೊರೆತಿರುವಂತೆಯೇ 2ನೇ ಬಾರಿಗೆ ನಡೆದ ‘ಬ್ರೇಕ್ ಪಾಸ್ಟ್’ ಮೀಟಿಂಗ್ ತೀವ್ರ ಕುತೂಹಲಕ್ಕೆ ಕಾರಣವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಉಪಾಹಾರಕ್ಕಾಗಿ ಭೇಟಿ ನೀಡಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಉಪಹಾರ ಸಭೆಯಲ್ಲಿ ಪಕ್ಷ ಹಾಗೂ ಸರ್ಕಾರದ ವಿಚಾರ ಕುರಿತು ಚರ್ಚೆ ಮಾಡಿದ್ದೇವೆ. ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿದ್ದು, ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪಿಸಿದ್ರೂ ಎದುರಿಸುತ್ತೇವೆ ಎಂದರು. ರಾಜ್ಯದ ನಾಯಕತ್ವದಲ್ಲಿನ ಯಾವುದೇ ಬದಲಾವಣೆಯನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ, ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಅಭಿಪ್ರಾಯಗಳನ್ನು ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸುಳಿವು ನೀಡಿದ್ದಾರೆ.

ಡಿ.ಕೆ .ಶಿವಕುಮಾರ್ ಯಾವಾಗ ಸಿಎಂ ಆಗ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಹೇಳಿದಾಗ ಎಂದರು. ಇದೇ ವೇಳೆ, ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಇಂದಿನ ಸಭೆಯಲ್ಲಿ ಪಕ್ಷ, ಸರ್ಕಾರ ಹಾಗೂ ಅಧಿವೇಶನದ ಬಗ್ಗೆ ಚರ್ಚೆ ನಡೆದಿದೆ. ಮುಂದಿನ ವಾರ ದೆಹಲಿಗೆ ಒಟ್ಟಾಗಿ ಹೋಗುತ್ತೇವೆ ಎಂದರು.

error: No Copying!