images-7.jpeg
Spread the love

ಮಣಿಪಾಲ: ದಿನಾಂಕ: 06/12/2025 (ಹಾಯ್ ಉಡುಪಿ ನ್ಯೂಸ್) ಹೆರ್ಗ ಗ್ರಾಮದ ಮಾರ್ಕೆಟ್ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನಿಲ್ ಬಿ ಎಂ ಅವರು ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನಿಲ್‌ ಬಿ ಎಂ ಅವರು ದಿನಾಂಕ:5-12-2025ರಂದು ಠಾಣೆಯಲ್ಲಿದ್ದಾಗ ಉಡುಪಿ ತಾಲೂಕು ಹೆರ್ಗಾ ಗ್ರಾಮದ ಮಾರ್ಕೇಟ್ ರಸ್ತೆಯ ಬಳಿಯಿರುವ ಜಯದುರ್ಗಾ ಮೊಬೈಲ್ ಅಂಗಡಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಹಣವನ್ನು ಪಣವಾಗಿ ಪಡೆದು ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿದ್ದಾನೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ ಕೂಡಲೇ ಉಡುಪಿ ತಾಲೂಕು ಹೆರ್ಗಾ ಗ್ರಾಮದ ಮಾರ್ಕೇಟ್ ರಸ್ತೆಯ ಬಳಿಯಿರುವ ಜಯದುರ್ಗಾ ಮೊಬೈಲ್ ಅಂಗಡಿ ಬಳಿಗೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದಾರೆ.

ಪೊಲೀಸರು ದಾಳಿ ನಡೆಸಿದ ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವರ್ಜನಿಕರಿಂದ ಹಣ ಸಂಗ್ರಹಿಸುತ್ತಿದ್ದು  ದಾಳಿ ನಡೆಸಿದಾಗ ಮಟ್ಕಾ ಜುಗಾರಿ ಆಡುತ್ತಿದ್ದ ಸಾರ್ವಜನಿಕರು ಸಮವಸ್ತ್ರದಲ್ಲಿ ಇದ್ದ ಪೊಲೀಸರನ್ನು  ಕಂಡು ಓಡಿ ಹೋಗಿದ್ದು, ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿದ್ದ ವ್ಯಕ್ತಿ ಕೂಡಾ ಓಡಲು ಪ್ರಯತ್ನಿಸಿದಾಗ ಪೊಲೀಸರು ಆತನನ್ನು ಹಿಡಿದು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಿದಾಗ ತನ್ನ ಹೆಸರು ಧನಂಜಯ ಶೆಟ್ಟಿ ಪ್ರಾಯ: 68 ವರ್ಷ ಹೆರ್ಗ ಗ್ರಾಮ ಉಡುಪಿ  ಎಂದು ತಿಳಿಸಿದ್ದು ಆತನು ತನ್ನ ಸ್ವಂತ ಲಾಭಕ್ಕೋಸ್ಕರ ಸಾರ್ವಜನಿಕರಿಂದ 1 ರೂಪಾಯಿಗೆ 70 ರೂಪಾಯಿ ಕೊಡುವುದಾಗಿ ನಂಬಿಸಿ ಹಣವನ್ನು ಪಣವಾಗಿ ಪಡೆದು ಮಟ್ಕಾ ಚೀಟಿ ಬರೆದು ಕೊಡುತ್ತಿರುವುದಾಗಿ ತಿಳಿಸಿದ್ದು, ಹಾಗೂ ಸಂಗ್ರಹಿಸಿದ ಹಣವನ್ನು ಅಂಬಾಗಿಲು ಲಿಯೋ ಎಂಬವನಿಗೆ ಕೊಡುತ್ತಿರುವುದಾಗಿ ತಿಳಿಸಿದ್ದು ನಂತರ ಪೊಲೀಸರು ಆತನನ್ನು ತಪಾಸಣೆ ನಡೆಸಿದಾಗ ಸಾರ್ವಜನಿಕರಿಂದ ಸಂಗ್ರಹಿಸಿದ 2270/- ರೂಪಾಯಿ ನಗದು ಹಣ, ಮಟ್ಕಾ ನಂಬ್ರ ಬರೆದ ಚೀಟಿ-1, ಬಾಲ್‌ಪೆನ್ನು-1 ಇದ್ದು  ಸ್ವತ್ತುಗಳನ್ನು  ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ   ಕಲಂ: 78 (i)(iii) ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಕಲಂ:112 ಭಾರತೀಯ ನ್ಯಾಯ ಸಂಹಿತೆರಂತೆ ಪ್ರಕರಣ ದಾಖಲಾಗಿದೆ.

error: No Copying!