IMG_20251211_222427.jpg
Spread the love

ಕುಂದಾಪುರ: ದಿನಾಂಕ :11-12-2025(ಹಾಯ್ ಉಡುಪಿ ನ್ಯೂಸ್) ಕಾವ್ರಾಡಿ ಗ್ರಾಮದ ಚರ್ಚ್ ಬಳಿಯ ಸಾರ್ವಜನಿಕ ಬಸ್ಸು  ನಿಲ್ದಾಣದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಯವರಾದ ನಾಸಿರ್ ಹುಸೇನ್ ಅವರು ಬಂಧಿಸಿದ್ದಾರೆ.

ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಪಿಎಸ್ಐಯವರಾದ  ನಾಸೀರ್ ಹುಸೇನ್ ಅವರಿಗೆ ದಿನಾಂಕ :09-12-2025 ರಂದು ಮಟ್ಕಾ ಜುಗಾರಿ ಆಟದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ  ಸಿಬ್ಬಂದಿಯವರೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಕುಂದಾಪುರ ತಾಲೂಕು ಕಾವ್ರಾಡಿ ಗ್ರಾಮದ ಕಾವ್ರಾಡಿ ಚರ್ಚ್ ಬಳಿಯ ಸಾರ್ವಜನಿಕ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿ ಯೋರ್ವ ತನ್ನ ಸ್ವಂತ ಲಾಭಕ್ಕಾಗಿ ಮಟ್ಕಾ ಚೀಟಿ ಬರೆದು ಸಾರ್ವಜನಿಕರಿಂದ ಹಣಸಂಗ್ರಹ ಮಾಡುತ್ತಿದ್ದು ಪೊಲೀಸರು ದಾಳಿ ನಡೆಸಿ ಮಟ್ಕಾ ದಂಧೆಕೋರ ಕೆ, ಉದಯ ಎಂಬವನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ .

ಆತನಿಂದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು ಹಣ 2400/- ರೂಪಾಯಿ ಮಟ್ಕಾ ಚೀಟಿ-1, ಬಾಲ್ ಪೆನ್ನು -1 ನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ   ಕಲಂ: 78(i) & (iii) KP Act ರಂತೆ ಪ್ರಕರಣ ದಾಖಲಾಗಿದೆ.

error: No Copying!