ಮಣಿಪಾಲ: ದಿನಾಂಕ : 12-12-2025 (ಹಾಯ್ ಉಡುಪಿ ನ್ಯೂಸ್) ಪೆರಂಪಳ್ಳಿ ಗಣಪತಿ ಕಟ್ಟೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅಕ್ಷಯ ಕುಮಾರಿ ಎಸ್.ಎನ್ ಅವರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅಕ್ಷಯಕುಮಾರಿ ಎಸ್,ಎನ್ ಅವರಿಗೆ ದಿನಾಂಕ:10-12-2025 ರಂದು ಪೆರಂಪಳ್ಳಿ ಗಣಪತಿಕಟ್ಟೆ ಡಿಸೋಜಾ ಮೊಬೈಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಹಣವನ್ನು ಪಣವಾಗಿ ಪಡೆದು ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವುದಾಗಿ ಸಾರ್ವಜನಿಕ ಮಾಹಿತಿ ಬಂದ ಮೇರೆಗೆ ಕೂಡಲೇ ದಾಳಿ ನಡೆಸಿದ್ದಾರೆ .
ದಾಳಿ ನಡೆಸಿದಾಗ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಹಿಡಿದು ಬಂಧಿಸಿ ವಿಚಾರಣೆ ನಡೆಸಿದಾಗ ತನ್ನ ಹೆಸರು ವಿಲ್ಲಿ ಬೋಲ್ಡ್ ದಿನೇಶ್ ಡಿಸೋಜಾ (52̧̧) ಮೂಡು ಪೆರಂಪಳ್ಳಿ ಶಿವಳ್ಳಿ ಗ್ರಾಮ ಎಂದು ತಿಳಿಸಿದ್ದು ಆತನು ಸಂಗ್ರಹಿಸಿದ ಹಣವನ್ನು ಅಂಬಾಗಿಲು ಲಿಯೋ ಎಂಬಾತನಿಗೆ ಕೊಡುತ್ತಿರುವುದಾಗಿ ಆತನು ತನಗೆ ಕಮೀಶನ್ ನೀಡುತ್ತಿದ್ದುದಾಗಿ ತಿಳಿಸಿದ್ದು, ಸಾರ್ವಜನಿಕರಿಂದ ಸಂಗ್ರಹಿಸಿದ 1800/- ರೂಪಾಯಿ ನಗದು ಹಣ, ಮಟ್ಕಾ ನಂಬ್ರ ಬರೆದ ಚೀಟಿ, ಬಾಲ್‌ಪೆನ್ನು-1 ಹಾಗೂ ಆರೋಪಿಯ ವಿವೋ ಮೊಬೈಲ್ ನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕಲಂ:78 (i)(iii) ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಕಲಂ:112 ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿದೆ.
