ದಿನಾಂಕ :12-12-2025(ಹಾಯ್ ಉಡುಪಿ ನ್ಯೂಸ್) ಉಪ್ಪೂರು ಗ್ರಾಮದ ಲಕ್ಷ್ಮೀ ಬಾರ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ ಅವರು ಬಂಧಿಸಿದ್ದಾರೆ
ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ ಅವರು ದಿನಾಂಕ:10-12-2025 ರಂದು ಹಗಲು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಪ್ಪೂರು ಗ್ರಾಮದ ಲಕ್ಷ್ಮೀ ಬಾರ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದಿದ್ದು ಕೂಡಲೇ ಸಿಬ್ಬಂದಿ ಗಳೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ .
ದಾಳಿ ನಡೆಸಿದ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಆರೋಪಿ ಕಮಲಾಕ್ಷ ಎಂಬಾತನನ್ನು ಹಿಡಿದು ಬಂಧಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನು ಸಾರ್ವಜನಿಕರಿಂದ ಅದೃಷ್ಟದ ಆಟ ಮಟ್ಕಾ ಜುಗಾರಿ ಬಗ್ಗೆ ಸಂಗ್ರಹಿಸಿದ ಹಣವನ್ನು ಒಟ್ಟು ಮಾಡಿ 2ನೇ ಆರೋಪಿ ಲಿಯೋ ಕರ್ನೆಲಿಯೋ ಎಂಬಾತನಿಗೆ ನೀಡುವುದಾಗಿ ತಿಳಿಸಿದ್ದು ನಂತರ ಆರೋಪಿಯ ವಶದಲ್ಲಿದ್ದ ಮಟ್ಕಾ ಜುಗಾರಿ ಬಗ್ಗೆ ಸಂಗ್ರಹಿಸಿದ ನಗದು ಹಣ ರೂಪಾಯಿ 1710/- ಹಾಗೂ ಮಟ್ಕಾ ನಂಬ್ರಗಳನ್ನು ಬರೆದಿರುವ ಚೀಟಿ-1, ಮಟ್ಕಾ ನಂಬ್ರಗಳನ್ನು ಬರೆಯಲು ಉಪಯೋಗಿಸುವ ಹಳದಿ ಬಣ್ಣದ ಬಾಲ್‌ಪೆನ್-1 ಅನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕಲಂ: 112 BNS & 78(I) (III) KP ACT ರಂತೆ ಪ್ರಕರಣ ದಾಖಲಾಗಿದೆ.
