images-12.jpeg
Spread the love

ಹೆಬ್ರಿ: ದಿನಾಂಕ :13/12/2025 (ಹಾಯ್ ಉಡುಪಿ ನ್ಯೂಸ್)ನಾಲ್ಕೂರು ಗ್ರಾಮದ ಚಾಕ್ಟಿಕಟ್ಟೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಚಂದ್ರ ಎಕೆ ಅವರು ಬಂಧಿಸಿದ್ದಾರೆ.

ಹೆಬ್ರಿ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಚಂದ್ರ ಎ ಕೆ, ಅವರಿಗೆ ದಿನಾಂಕ :11-12-2025 ರಂದು ನಾಲ್ಕೂರು ಗ್ರಾಮದ ಚಾಕ್ಟಿಕಟ್ಟೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿಯು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಎಂಬ ಅಟ ಆಡುತ್ತಿರುವುದಾಗಿ ಸಾರ್ವಜನಿಕ ರಿಂದ ಮಾಹಿತಿ ಬಂದ ಮೇರೆಗೆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ದಾಳಿ ಮಾಡಿ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿದು ಬಂಧಿಸಿ ವಿಚಾರಣೆ ನಡೆಸಿದಾಗ ಆತ ಶಂಕರ ನಾಯ್ಕ (61),ಕುದಿ ಗ್ರಾಮ, ಬ್ರಹ್ಮಾವರ ಎಂದು ತಿಳಿಸಿದ್ದು ಆತನ ಬಳಿ ಇದ್ದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು 1100/- ರೂಪಾಯಿ ಹಾಗೂ ಮಟ್ಕಾ ನಂಬ್ರ ಬರೆದ ಚೀಟಿ-1 ಹಾಗೂ ಬಾಲ್ ಪೆನ್ನು-1 ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 74/2025 ಕಲಂ: 78(1)(3) KP ACT ರಂತೆ ಪ್ರಕರಣ ದಾಖಲಾಗಿದೆ.

error: No Copying!