images-2.jpeg
Spread the love

ಕೋಟ: ದಿನಾಂಕ 12/12/2025 (ಹಾಯ್ ಉಡುಪಿ ನ್ಯೂಸ್) ಬೇಳೂರು ಗ್ರಾಮದ ಗುಳ್ಳಾಡಿ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ದೋ ನಂಬರ್ ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು ಕೋಟ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಹಾಂತೇಶ ಜಾಬಗೌಡ ಅವರು ಬಂಧಿಸಿದ್ದಾರೆ.

ಕೋಟ ಪೊಲೀಸ್‌ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಮಹಾಂತೇಶ ಜಾಬಗೌಡ ಅವರು ದಿನಾಂಕ:11-12-2025 ರಂದು ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಕುಂದಾಪುರ ತಾಲೂಕು ಬೇಳೂರು ಗ್ರಾಮದ ಗುಳ್ಳಾಡಿ ಜಂಕ್ಷನ್‌ ಹತ್ತಿರದ ಬಸ್‌ ಸ್ಟ್ಯಾಂಡ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಮಟ್ಕಾ ಜುಗಾರಿ ದಂಧೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ ಮಾಹಿತಿಯ ಮೇರೆಗೆ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ .

ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ಓಡಿ ಹೋಗಿದ್ದು ಕುಂದಾಪುರ ಕೆದೂರು ಗ್ರಾಮದ ನಿವಾಸಿ ವಿಜಯ ಕುಮಾರ್ (46) ಎಂಬಾತನನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದು ಆತನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ಬಾಲ್‌ ಪೆನ್‌ ,ಮಟ್ಕಾ ಚೀಟಿ ನಗದು 1200/- ರೂಪಾಯಿ ಸ್ವಾಧಿನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ  ಕಲಂ: 78(1)(3) KP ACT ರಂತೆ ಪ್ರಕರಣ ದಾಖಲಾಗಿದೆ.

error: No Copying!