ದಿನಾಂಕ:15-12-2025 (ಹಾಯ್ ಉಡುಪಿ ನ್ಯೂಸ್)
ಕೋಟ: ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟ ತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ.
ಮೃತನನ್ನು ಪಡುಕರೆ ನಿವಾಸಿ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.
ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ .ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತ ಪಟ್ಟಿದ್ದಾನೆ ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ,ಕೋಟ ಠಾಣೆಯ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಟಿ ಹಾಗೂ ಠಾಣಾ ಎಸ್ಐ ಮಾಂತೇಶ್ ಜಾಬಗೌಡ ಅವರು ನಾಲ್ವರು ಯುವಕರನ್ನು ಬಂಧಿಸಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
