IMG-20251228-WA0034-1071x1536.jpg
Spread the love

ದಿನಾಂಕ: 28-12-2025(ಹಾಯ್ ಉಡುಪಿ ನ್ಯೂಸ್)

ಉದ್ಯಾವರ :   ಸಾಮಾಜಿಕ ಕಾರ್ಯಕರ್ತೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಉದ್ಯಾವರ ನಿವಾಸಿ ಹೆಲೆನ್ ಫೆರ್ನಾಂಡಿಸ್  ಅವರು ಇಂದು ಬೆಳಿಗ್ಗೆ ಕುಸಿದು ಬಿದ್ದು ಹೃದಯಾಘಾತದಿಂದ  ನಿಧನರಾಗಿದ್ದಾರೆ.

ಉದ್ಯಾವರ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ, ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದು . ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಇದರ ಸದಸ್ಯೆಯಾಗಿದ್ದು  ಪ್ರಸ್ತುತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ಉದ್ಯಾವರ ಚರ್ಚಿನ ವಿವಿಧ ಸಂಘ-ಸಂಸ್ಥೆಗಳಲ್ಲಿ ಮತ್ತು ವಿಶೇಷವಾಗಿ ಪಾಲನ ಮಂಡಳಿಯಲ್ಲಿಯೂ ಸೇವೆ ಸಲ್ಲಿಸಿದ್ದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

error: No Copying!