FB_IMG_1767437135341.jpg
Spread the love

ಉಡುಪಿ: ದಿನಾಂಕ:03-01-2026 (ಹಾಯ್ ಉಡುಪಿ ನ್ಯೂಸ್)  ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಗೆ ಚಾಲನೆ ನೀಡಲಾಯಿತು.

ಗೃಹ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಪ್ರಾರಂಭಿಸಲಾದ ಈ ಯೋಜನೆ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶವನ್ನು ಹೊಂದಿರುತ್ತದೆ. ದೌರ್ಜನ್ಯ, ಹಿಂಸೆ, ನಿರ್ಲಕ್ಷ ಅಥವಾ ಶೋಷಣೆ ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವುದು ಸಾರ್ವಜನಿಕ ಮತ್ತು ಖಾಸಗಿ ಸ್ಥಳದಲ್ಲಿ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆ ಹಾಗೂ ಬೆಂಬಲ ವ್ಯವಸ್ಥೆಗಳ ಬಗ್ಗೆ ಜಾಗೃತಿ ಮೂಡಿಸುವುದು ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆದು ಕಾನೂನಿನ ರಕ್ಷಣೆಯೊಂದಿಗೆ ಭಯ ಮುಕ್ತ ವಾತಾವರಣ ಸೃಷ್ಟಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆ ಮಧ್ಯಾಹ್ನ 2 ರಿಂದ ರಾತ್ರಿ 8 ಗಂಟೆಯವರೆಗೆ ಎರಡು ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಮಕ್ಕಳ ಸಹಾಯವಾಣಿ 1098 ಮಹಿಳಾ ಸಹಾಯವಾಣಿ 181 ಪೋಲಿಸ್ ಸಹಾಯವಾಣಿ 112 ಈ ಸಂಖ್ಯೆಗಳಿಗೆ ಕರೆ ಮಾಡುವುದರ ಮುಖಾಂತರ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಅಕ್ಕಾ ಪಡೆ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

error: No Copying!