images-12.jpeg
Spread the love

ಬ್ರಹ್ಮಾವರ: ದಿನಾಂಕ 07/01/2026 (ಹಾಯ್ ಉಡುಪಿ ನ್ಯೂಸ್)ಚಾಂತಾರು ಗ್ರಾಮದ ಮಾರಿಗುಡಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸುದರ್ಶನ ದೊಡಮನಿ ಅವರು ಬಂಧಿಸಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸುದರ್ಶನ್‌ ದೊಡಮನಿ ಅವರು ದಿನಾಂಕ:05-01-2026 ರಂದು ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಚಾಂತಾರು ಗ್ರಾಮದ ಬೀಟ್‌ ಸಿಬ್ಬಂದಿ ಮಹಾಲಿಂಗ ಪಾತ್ರೋಟ್‌ರವರು  ಕರೆ ಮಾಡಿ ಚಾಂತಾರು ಗ್ರಾಮದ ಮಾರಿಗುಡಿ ಎದುರುಗಡೆ ಬಸ್‌ನಿಲ್ದಾಣ ಕಡೆಯಿಂದ ಮಹಾಲಿಂಗೇಶ್ವರ ದೇವಸ್ಥಾನ ಕಡೆಗೆ ಹಾದುಹೋಗಿರುವ ಸಾರ್ವಜನಿಕ ರಸ್ತೆ ಬದಿಯಲ್ಲಿರುವ ಆಲದ ಮರದ ಕೆಳಗಡೆ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಯುತ್ತಿರುವ ಬಗ್ಗೆ ತಿಳಿಸಿದ್ದಾರೆ .

ಮಟ್ಕಾ ಜುಗಾರಿ ನಡೆಯುತ್ತಿರುವ ಮಾಹಿತಿ ಬಂದ ಮೇರೆಗೆ ಸುದರ್ಶನ ದೊಡಮನಿ ಅವರು ಕೂಡಲೇ ಸಿಬ್ಬಂದಿ ಗಳೊಂದಿಗೆ ಸ್ಥಳಕ್ಕೆ ಹೋದಾಗ 1ನೇ ಆರೋಪಿ ರಾಮಕೃಷ್ಣ ಎಂಬವನು ರಸ್ತೆಯಲ್ಲಿ ಹೋಗುತ್ತಿದ್ದ ಜನರನ್ನು ಕೂಗಿ ಕರೆದು 00 ರಿಂದ 99 ರ ಒಳಗಿನ ನಂಬರ್‌ಗೆ ಜನರಿಂದ 1 ರೂಪಾಯಿಗೆ 70 ರೂಪಾಯಿ ನೀಡುವುದಾಗಿ ಹೇಳಿ ಹಣವನ್ನು ಸಂಗ್ರಹಿಸಿ ಚೀಟಿಯಲ್ಲಿ ಬರೆಯುತ್ತಿದ್ದು, ಆತನು ಮಟ್ಕಾ ಜುಗಾರಿ ಆಟಕ್ಕಾಗಿ ಜನರಿಂದ ಹಣವನ್ನು ತೆಗೆದುಕೊಳ್ಳುತ್ತಿರುವಾಗ  ದಾಳಿ ನಡೆಸಿದ್ದು ಆವಾಗ ಅಲ್ಲಿ ಸೇರಿರುವ ಜನರು ಓಡಿ ಹೋಗಿದ್ದು 1ನೇ ಆರೋಪಿ ರಾಮಕೃಷ್ಣ ನನ್ನು ಪೊಲೀಸರು ಹಿಡಿದು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ರಾಮಕೃಷ್ಣ ನನ್ನು ಪೊಲೀಸರು ವಿಚಾರಣೆ ನಡೆಸಿದಾಗ ತಾನು ಸಾರ್ವಜನಿಕರಿಂದ ಅದೃಷ್ಟದ ಆಟ ಮಟ್ಕಾ ಜುಗಾರಿ ಬಗ್ಗೆ ಸಂಗ್ರಹಿಸಿದ ಹಣದಲ್ಲಿ ಸ್ವಲ್ಪ ಹಣ ಇಟ್ಟುಕೊಂಡು ಉಳಿದ ಹಣವನ್ನು ಒಟ್ಟು ಮಾಡಿ 2 ನೇ ಆರೋಪಿ ಕಿಶೋರ ಹಾಗೂ 3ನೇ ಆರೋಪಿ ಲಿಯೋ ಕರ್ನೇಲಿಯೋ ಎಂಬವರಿಗೆ ನೀಡುವುದಾಗಿ ತಿಳಿಸಿದ್ದಾನೆ.

  1ನೇ ಆರೋಪಿ ರಾಮಕೃಷ್ಣ ನ ವಶದಲ್ಲಿದ್ದ ಮಟ್ಕಾ ಜುಗಾರಿ ಬಗ್ಗೆ ಸಂಗ್ರಹಿಸಿದ ನಗದು ಹಣ ರೂ. 2450/- ಹಾಗೂ ಮಟ್ಕಾ ನಂಬ್ರಗಳನ್ನು ಬರೆದಿರುವ ಚೀಟಿ-1, ಮಟ್ಕಾ ನಂಬ್ರಗಳನ್ನು ಬರೆಯಲು ಉಪಯೋಗಿಸುವ ಬಾಲ್‌ಪೆನ್-1 ಅನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ  ಕಲಂ: 112 BNS & 78(I) (III) KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.

error: No Copying!