ಉಡುಪಿ : ದಿನಾಂಕ:10-01-2026 ಹಾಯ್ ಉಡುಪಿ ನ್ಯೂಸ್) ಜಿಲ್ಲೆಯ ನಾಡಹಬ್ಬ ಪರ್ಯಾಯ ಮಹೋತ್ಸವದ ಪ್ರಾರಂಭ ಶೀರೂರು ಮಠದ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ ಅವರ ಪುರಪ್ರವೇಶ ಕಾರ್ಯಕ್ರಮದಲ್ಲಿ ಉಡುಪಿ ನಗರ ಸಭೆಯ ಆಡಳಿತಾಧಿಕಾರಿ ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರು ಶಿರೂರು ಮಠದ ಪರಮ ಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರಿಗೆ ಪೌರ ಸಮ್ಮಾನ ಮಾಡುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದರು.
ಮುಂದಿನ ಶಿರೂರು ಪರ್ಯಾಯ ಅವಧಿ ಯಲ್ಲಿ ಜಿಲ್ಲೆಯ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಗರಿಮೆ ಮತ್ತಷ್ಟು ಹೆಚ್ಚಲಿ ಎಂದು ಹೇಳಿದರು.


