images-1.jpeg
Spread the love

ದಿನಾಂಕ:16-01-2026 (ಹಾಯ್ ಉಡುಪಿ ನ್ಯೂಸ್)

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದಿನಿಂದ 2 ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಡಿಕೆಶಿ ದೆಹಲಿ ಯಾತ್ರೆ ಕುತೂಹಲ ಕೆರಳಿಸಿದ್ದು, ಇದೀಗ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಮೂಲಗಳ ಪ್ರಕಾರ ಡಿಕೆ ಶಿವಕುಮಾರ್ ಅಸ್ಸಾಂ ಚುನಾವಣೆ ಹಿನ್ನಲೆಯಲ್ಲಿ ದೆಹಲಿಗೆ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ಇದೇ ವೇಳೆ ರಾಜ್ಯ ರಾಜಕೀಯದ ಕುರಿತೂ ಮಹತ್ವದ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

error: No Copying!