IMG-20260126-WA0032-1024x576.jpg
Spread the love

ಮಲ್ಪೆ : ದಿನಾಂಕ :26-01-2026 (ಹಾಯ್ ಉಡುಪಿ ನ್ಯೂಸ್)  ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಪಲ್ಟಿಯಾದ ಪರಿಣಾಮ ನಾಲ್ವರ ಸ್ಥಿತಿ ಗಂಭೀರವಾಗಿದ್ದು  ಹಲವು ಮಂದಿ ಅಸ್ವಸ್ಥಗೊಂಡ ಘಟನೆ ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಬೀಚ್ ಸಮೀಪ ನಡೆದಿದೆ.

ರೆಸಾರ್ಟ್‌ನಲ್ಲಿ ಉಳಿದಿದ್ದ ಪ್ರವಾಸಿಗರನ್ನು ವಿಹಾರಕ್ಕೆಂದು ದೋಣಿಯಲ್ಲಿ ಸಮುದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಇದರಲ್ಲಿ ಸುಮಾರು 10 ಮಂದಿ ಪ್ರವಾಸಿಗರಿದ್ದರು. ಇವರು ಯಾರು ಕೂಡ ಲೈಫ್ ಜಾಕೆಟ್ ಧರಿಸಿಲ್ಲ ಎಂದು ತಿಳಿದುಬಂದಿದೆ.

ನೀರಿನ ಮೇಲೆ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿದ್ದು, ಎಲ್ಲ ಪ್ರವಾಸಿಗರು ನೀರಿಗೆ ಬಿದ್ದರೆಂದು ತಿಳಿದುಬಂದಿದೆ. ಇದರಲ್ಲಿ ಹಲವು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ನಾಲ್ವರು ತೀವ್ರವಾಗಿ ಅಸ್ವಸ್ಥಗೊಂಡಿದ್ದು,  ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸ್ಥಳದಲ್ಲಿ ಮಲ್ಪೆ ಪೊಲೀಸರು  ಪರಿಶೀಲನೆ ನಡೆಸುತ್ತಿದ್ದಾರೆ.

error: No Copying!