ದಿನಾಂಕ:27-01-2026(ಹಾಯ್ ಉಡುಪಿ ನ್ಯೂಸ್)
ಹುಬ್ಬಳ್ಳಿ : ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಗ್ರಾಮೀಣ ಭಾಗದ ದಿನಸಿ ಅಂಗಡಿಗಳಲ್ಲೂ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡುವ ಮೂಲಕ ಕುಡುಕರ ಸಾಮ್ರಾಜ್ಯ ಕಟ್ಟಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗೆ ಹಣ ನೀಡಲು ಆಗುತ್ತಿಲ್ಲ. ಒಂದೆಡೆ ಬೆಲೆ ಏರಿಕೆ ಮಾಡಿ ತನ್ನ ಬೊಕ್ಕಸ ತುಂಬಿಸಿಕೊಳ್ಳುತ್ತಿದ್ದರೆ, ಮತ್ತೊಂದೆಡೆ ಹಳ್ಳಿಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ಕುಡುಕರ ರಾಜ್ಯ ಮಾಡಲು ಮುಂದಾಗಿದೆ. ಲಂಚದ ಹಣದ ಮೇಲೆಯೇ ಸರ್ಕಾರ ನಡೆಯುತ್ತಿದ್ದು, ಇದರ ಪಾಪದ ಕೊಡ ತುಂಬುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
