FB_IMG_1769771103117.jpg
Spread the love

ಉಡುಪಿ: ದಿನಾಂಕ: 30-01-2026 (ಹಾಯ್ ಉಡುಪಿ ನ್ಯೂಸ್) ಎಲ್ಲಾ ಬಸ್ಸುಗಳಲ್ಲಿ ಕಡ್ಡಾಯವಾಗಿ ಡೋರ್ ಅಳವಡಿಸುವ ಸಂಬಂಧ ಉಡುಪಿ ಸಿಟಿ ಬಸ್ ಮಾಲಕರೊಂದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಚರ್ಚಿಸಿದರು.

ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಬಸ್ಸುಗಳಿಗೆ ಡೋರ್‌ಗಳನ್ನು ಶೀಘ್ರವಾಗಿ ಅಳವಡಿಸಬೇಕಾಗಿರುತ್ತದೆ, ಆದರೆ ಮಾರ್ಚ್ ವರೆಗೆ ಶಾಲೆಗಳು ನಡೆಯುತ್ತಿರುವುದರಿಂದ ಮತ್ತು ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಸ್ಸುಗಳು ವ್ಯತ್ಯಯವಾಗುವುದನ್ನು ತಡೆಯಲು ಮತ್ತು ಎಲ್ಲಾ ಬಸ್‌ಗಳಿಗೆ ಬಾಗಿಲುಗಳನ್ನು ಅಳವಡಿಸಲು ಸೀಮಿತ ಗ್ಯಾರೇಜ್‌ಗಳು ಮಾತ್ರವೇ ಇರುವುದನ್ನು ಸಹ ಪರಿಗಣಿಸಿ, ಎಲ್ಲಾ ಬಸ್‌ಗಳಿಗೆ ಬಾಗಿಲುಗಳನ್ನು ಅಳವಡಿಸಲು ಜೂನ್ 1 ರವರೆಗೆ ಸಮಯಾವಕಾಶವನ್ನು ಜಿಲ್ಲಾಧಿಕಾರಿಗಳು ನೀಡಿದರು.

ಎಫ್ ಸಿ ನವೀಕರಣಕ್ಕೆ ಬಾಕಿ ಇರುವಂತಹ ಬಸ್ಸುಗಳಿಗೆ ಜೂನ್ 1 ರೊಳಗಾಗಿ ಬಾಗಿಲನ್ನು ಅಳವಡಿಸುವ ಷರತ್ತಿಗೊಳಪಟ್ಟು ಅರ್ಹತೆ ಇದ್ದಲ್ಲಿ ಎಫ್ ಸಿ ನವೀಕರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಅವಧಿಯೊಳಗೆ ಬಸ್ಗಳಿಗೆ ಬಾಗಿಲನ್ನು ಅಳವಡಿಸದಿದ್ದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದೆಂದು ಬಸ್ ಮಾಲಕರಿಗೆ ಸಭೆಯಲ್ಲಿ ತಿಳಿಸಲಾಯಿತು. ಅಲ್ಲದೇ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪುಟ್ ಬೋರ್ಡ್ ನಲ್ಲಿ ನಿಂತು ಪ್ರಯಾಣಿಸದಂತೆ ಬಾಗಿಲುಗಳನ್ನು ಅಳವಡಿಸುವವರೆಗೆ ಅರಿವು ಮೂಡಿಸುವ ಕೆಲಸ ಮಾಡುವಂತೆಯೂ ಕೂಡಾ ಜಿಲ್ಲಾಧಿಕಾರಿಗಳು ಸೂಚಿಸಿದರು.

error: No Copying!