kannadaprabha_2026-02-07_ltilk497_Sajeer.jpg
Spread the love

ದಿನಾಂಕ:07-02-2026(ಹಾಯ್ ಉಡುಪಿ ನ್ಯೂಸ್)

ವಯನಾಡು: ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕೇರಳದ ವಯನಾಡಿನಲ್ಲಿ ಕಾರಿನಲ್ಲಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಡಗಿನ ಪೊನ್ನಂಪೇಟೆಯ ಕುಟ್ಟ ಗ್ರಾಮದ ನಿವಾಸಿ ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ.

ಆದರೆ ಅದೃಷ್ಟವಶಾತ್ ಸಜೀರ್ ನ ಇಬ್ಬರು ಮಕ್ಕಳು ಹಾಗೂ ಪತ್ನಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ಸಜೀರ್ ಪತ್ನಿ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ. ಕುಟ್ಟ ಗ್ರಾಮದಲ್ಲಿ ಸಜೀರ್ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಬಾಪು ಎಂಬಾತ ಸಜೀರ್ ಬಳಿ 20 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದಿದ್ದ ಹಣವನ್ನು ಬಾಪು ವಾಪಸ್ ಕೊಡದಿದ್ದಕ್ಕೆ ಆತನ ಮನೆ ಎದುರೇ ಸಜೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನ ಸಜೀರ್ ವಿಡಿಯೋ ರೆಕಾರ್ಡ್ ಮಾಡಿದ್ದು ನಮ್ಮ ಸಾವಿಗೆ ಬಾಪು ಕಾರಣ ಎಂದು ಹೇಳಿದ್ದಾರೆ.

error: No Copying!