bvr_1770869757.jpg
Spread the love

ಬ್ರಹ್ಮಾವರ: ದಿನಾಂಕ :12-02-2026 (ಹಾಯ್ ಉಡುಪಿ ನ್ಯೂಸ್) ಬ್ರಹ್ಮಾವರ ಪರಿಸರದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮದ ದಿಲ್‌ಕುಶ್‌ ಬಾರ್‌ & ರೆಸ್ಟೊರೆಂಟ್‌ ಬಳಿ ದಿನಾಂಕ :09-02-2026 ರಂದು  ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸನ್ನು  ಚೇರ್ಕಾಡಿ ಗ್ರಾಮದ ನಿವಾಸಿ ರವಿರಾಜ್(32) ಎಂಬವರು ಅಂಬುಲೆನ್ಸ್‌ನ್ನಲ್ಲಿ ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದು, ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಆತನಿಗೆ ಪ್ರಥಮ ಚಿಕಿತ್ಸೆ ನೀಡಿ, ನಂತರ ವೈದ್ಯರ ಸೂಚನೆಯಂತೆ ಅಲ್ಲಿಂದ ಅವನನ್ನು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಿರುತ್ತಾರೆ. ದಿನಾಂಕ 11/02/2026 ರಂದು ಬೆಳಿಗ್ಗೆ  ಅಪರಿಚಿತ ವ್ಯಕ್ತಿಯು ಚಿಕಿತ್ಸೆಗೆ ಸ್ಪಂದಿಸದೆ ಉಡುಪಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ  ಕಲಂ: 194 BNSS ರಂತೆ ಪ್ರಕರಣ ದಾಖಲಾಗಿದೆ.

error: No Copying!