kannadaprabha_2026-02-16_cw5oiz96_newindianexpress2026-02-16ppe3ne9lpm-modi.jpeg
Spread the love

ದಿನಾಂಕ:16-02-2026 (ಹಾಯ್ ಉಡುಪಿ ನ್ಯೂಸ್)

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ನವದೆಹಲಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋವನ್ನು (India AI Impact Expo) ಉದ್ಘಾಟಿಸಿದರು. ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ ಪ್ರಧಾನಿ, ಎಕ್ಸ್‌ಪೋದಲ್ಲಿ ಭಾಗವಹಿಸಿದ್ದ ಕಂಪನಿಗಳೊಂದಿಗೆ ಮಾತನಾಡಿದರು.

ಫೆಬ್ರವರಿ 16-20 ರವರೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಎಕ್ಸ್‌ಪೋ ಜೊತೆಗೆ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯನ್ನು ಆಯೋಜಿಸಲಾಗಿದೆ. ರಾಷ್ಟ್ರಗಳು ತಮ್ಮ AI ಕಾರ್ಯಸೂಚಿಯನ್ನು ವ್ಯಾಖ್ಯಾನಿಸಲು ಹೆಚ್ಚಿನ ಆಸಕ್ತಿ ತೋರುತ್ತಿರುವ ಸಮಯದಲ್ಲಿ ನೀತಿ ನಿರೂಪಕರು, ಉದ್ಯಮದ ನಾಯಕರು ಮತ್ತು ತಂತ್ರಜ್ಞಾನ ನಾವೀನ್ಯಕಾರರನ್ನು ಇದು ಒಟ್ಟುಗೂಡಿಸುತ್ತದೆ.

ಎಕ್ಸ್‌ಪೋದಲ್ಲಿ 600 ಕ್ಕೂ ಹೆಚ್ಚು ಉನ್ನತ-ಸಾಮರ್ಥ್ಯದ ಸ್ಟಾರ್ಟ್‌ಅಪ್‌ಗಳು ಮತ್ತು 13 ದೇಶದ ಪೆವಿಲಿಯನ್‌ ಗಳಿದ್ದು, AI ಪರಿಸರ ವ್ಯವಸ್ಥೆಯಲ್ಲಿ ಅಂತಾರಾಷ್ಟ್ರೀಯ ಸಹಯೋಗವನ್ನು ಪ್ರದರ್ಶಿಸಿದೆ. ಎಕ್ಸ್‌ಪೋ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳು, ಸ್ಟಾರ್ಟ್‌ಅಪ್‌ಗಳು, ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಅಂತಾರಾಷ್ಟ್ರೀಯ ಪಾಲುದಾರರನ್ನು ಒಗ್ಗೂಡಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮತ್ತು ಬ್ರೆಜಿಲ್ ಅಧ್ಯಕ್ಷ ಲುಲಾ ಡಾ ಸಿಲ್ವಾ ಸೇರಿದಂತೆ ಹಲವು ಜಾಗತಿಕ ನಾಯಕರು AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ. 45ಕ್ಕೂ ಹೆಚ್ಚು ದೇಶಗಳ ಸಚಿವರ ನಿಯೋಗಗಳು ಶೃಂಗಸಭೆಯಲ್ಲಿ ಭಾಗವಹಿಸಲಿವೆ.

ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ (UN Secretary General ) ಸೇರಿದಂತೆ ಹಲವು ಅಂತಾರಾಷ್ಟ್ರೀಯ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸಹ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಶೃಂಗಸಭೆಯನ್ನು ಉದ್ದೇಶಿಸಿ, ಮಾತನಾಡಲಿದ್ದು, ಎಕ್ಸ್‌ಪೋಗೆ ಭೇಟಿ ನೀಡಲಿದ್ದಾರೆ ಮತ್ತು ಸಿಇಒಗಳೊಂದಿಗೆ ಸಮಲೋಚನೆ ನಡೆಸಲಿದ್ದಾರೆ.

error: No Copying!