ಬೆಂಗಳೂರು: ದಿನಾಂಕ:18-02-2026 (ಹಾಯ್ ಉಡುಪಿ ನ್ಯೂಸ್)
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (News byte) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ತೆಗೆದುಕೊಳ್ಳಬಾರದು ಎಂದು ನಿಯಮ ಜಾರಿಗೊಳಿಸಲಾಗಿದೆ. ಸರ್ಕಾರದ ಈ ನಡೆ ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಖಂಡಿಸಿದ್ದಾರೆ
