kannadaprabha_2026-02-22_l6ckap4p_prajavani2026-02-22cot44y5lfile84ooohsyoh2940kz226.jpeg
Spread the love

ದಿನಾಂಕ:22-02-2026(ಹಾಯ್ ಉಡುಪಿ ನ್ಯೂಸ್ )

ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಶನಿವಾರ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಆಪ್ತ ಸಹಾಯಕರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾರ್ಚ್ 3ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಭಾನುವಾರ ಅವರನ್ನು ಬೆಂಗಳೂರಿಗೆ ಕರೆತಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಿದರು.

ಬೆಂಗಳೂರಿನ ನ್ಯಾಯಾಂಗ ಬಡಾವಣೆಯಲ್ಲಿರುವ ನ್ಯಾಯಾಧೀಶರ ನಿವಾಸದಲ್ಲಿ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಆಪ್ತರನ್ನು ಹಾಜರುಪಡಿಸಲಾಯಿತು. ನ್ಯಾಯಾಧೀಶರ ಆದೇಶದಂತೆ ಮೂವರನ್ನು ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದರು.

error: No Copying!