IMG_20260228_124431.jpg
Spread the love

ಉಡುಪಿ: ದಿನಾಂಕ:28-02-2026(ಹಾಯ್ ಉಡುಪಿ ನ್ಯೂಸ್) ಬ್ರಹ್ಮಾವರದ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದ ಶೇಷಗಿರಿ ಭಟ್ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

error: No Copying!