IMG_20260301_104355.jpg
Spread the love

ಉಡುಪಿ: ದಿನಾಂಕ:01-03-2026(ಹಾಯ್ ಉಡುಪಿ ನ್ಯೂಸ್)

ಉಡುಪಿ ಜಿಲ್ಲಾ ಪೊಲೀಸರು ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನಾಸಿರ್ ಹುಸೇನ್ (59) ಅವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ಇಂದು ಸಂಭವಿಸಿದೆ.

ನಾಸೀರ್ ಹುಸೇನ್ ಅವರು ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಅಮಾಸೆಬೈಲು, ಕುಂದಾಪುರ, ಬೈಂದೂರು, ಕೊಲ್ಲೂರು, ಶಂಕರನಾರಾಯಣದಲ್ಲಿ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಡ್ರಗ್ಸ್ ನಿರ್ಮೂಲನೆಗಾಗಿ, ಮಾದಕವಸ್ತು ಸೇವನೆಯ ವಿರುದ್ಧ ಸಾರ್ವಜನಿಕರ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಭಾಗವಹಿಸಿದ್ದ ಅವರು ಕುಸಿದು ಬಿದ್ದು ಮೃತಪಟ್ಟಿದ್ದು ಮೃತದೇಹ ಮಣಿಪಾಲ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

error: No Copying!