ಉಡುಪಿ: ದಿನಾಂಕ: 03-03-2026(ಹಾಯ್ ಉಡುಪಿ ನ್ಯೂಸ್) ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೋಲಿಸ್ ಠಾಣಾ ವ್ಯಾಪ್ತಿಯ ಕೊಡವೂರು ಶಂಕರನಾರಾಯಣ ದೇವಸ್ಥಾನದ ಹಿಂದುಗಡೆ ಡ್ರೈನೇಜ್ ನೀರು ಹರಿಯುವ ಇಂದ್ರಾಣಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ಸೋಮವಾರ ನಡೆದಿದೆ.
ಮೃತ ವ್ಯಕ್ತಿ ಸುರೇಶ್ ಪೂಜಾರಿ (54) ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಯಾಗಿದ್ದು, ಕೆಲವುದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಮಲ್ಪೆ ಪೊಲೀಸರು ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.
