n7031415031772640647759b9d796142d8aa14d31633ed9baec5e04aebf75e1e433e2611b5fe399fcaf9e85.jpg
Spread the love

ದಿನಾಂಕ:05-03-2026 (ಹಾಯ್ ಉಡುಪಿ ನ್ಯೂಸ್)

ಬೆಂಗಳೂರು : ಕೆಪಿಎಸ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಿದ್ದು ಫಲಿತಾಂಶವನ್ನು ಸಹ ಬಿಡುಗಡೆ ಮಾಡಲಾಗಿದೆ ಆಧಾರ ಇಲ್ಲದೆ ಭ್ರಷ್ಟಾಚಾರ ಆರೋಪ ಮಾಡುವುದು ಸರಿಯಲ್ಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಕೇಳಿದ್ದಾರೆ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ.

ಫಲಿತಾಂಶದ ಕುರಿತು ಹಲವಾರು ಜನ ತುಂಬಾ ತಪ್ಪುಗಳು ನಡೆದಿದೆ ಎಂದು ಹೇಳುತ್ತಿದ್ದಾರೆ. ಈ ಕುರಿತು ಮುಖ್ಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಯಾವುದೇ ತಪ್ಪುಗಳು ಇದರಲ್ಲಿ ನಡೆದಿಲ್ಲ. ಮಾಹಿತಿಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಸ್ವಲ್ಪ ಗೊಂದಲಕ್ಕೆ ಈಡಾಗಿದ್ದಾರೆ. ಯಾವುದೇ ಮಾಹಿತಿ ಇದ್ದರೂ ಕೂಡ ಅವರು ನಮ್ಮನ್ನು ಕೇಳಬಹುದು ನಾವು ಅದನ್ನು ಪರಿಶೀಲನೆ ಮಾಡಿ ಅವರಿಗೆ ಉತ್ತರ ಕೊಡುತ್ತೇವೆ.

ಒಂದೇ ಕೊಠಡಿಯಲ್ಲಿ ಇರುವವರು 15, 16 ಜನ ಆಯ್ಕೆ ಮಾಡಿದ್ದಾರೆ ಎನ್ನುವುದು ಅದನ್ನು ಕೂಡ ನಾವು ಆಂತರಿಕವಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಒಂದೇ ಪರೀಕ್ಷೆ ಕೇಂದ್ರದಿಂದ 15 ಜನ ಆಯ್ಕೆಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು. ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟಿಸಿ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿತ್ತು. 1:3 ಅನುಪಾತ ರಲ್ಲಿ ವಿದ್ಯಾರ್ಥಿಗಳು ವ್ಯಕ್ತಿತ್ವ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ. ಒಂದೇ ಕುಟುಂಬದ ಹಲವರು ಆಯ್ಕೆಯಾಗಿರುವ ಆರೋಪ ಕೇಳಿ ಬಂದಿದೆ ಎಂದು ಕೆಪಿಎಸ್ಸಿ ವಿರುದ್ಧ ಪರೀಕ್ಷೆ ಬರೆದ ಹಲವು ಅಭ್ಯರ್ಥಿಗಳು ಆರೋಪಿಸಿದ್ದಾರೆ.

error: No Copying!