ದಿನಾಂಕ: 05-03-2026 (ಹಾಯ್ ಉಡುಪಿ ನ್ಯೂಸ್)
ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಟಿ20 ವಿಶ್ವಕಪ್ ಸೆಮಿಫೈನಲ್ಸ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಭಾರತ ಫೈನಲ್ಸ್ ಗೆ ಪ್ರವೇಶಿಸಿದೆ.
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡದ ವಿರುದ್ಧ ಭಾರತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ ಗಳ ಭಾರಿ ಮೊತ್ತವನ್ನು ದಾಖಲಿಸಿತ್ತು.
42 ಎಸೆತಗಳಲ್ಲಿ 89 ರನ್ ಗಳಿಸಿದ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ಪರಿಣಾಮ ಭಾರತ ಬೃಹತ್ ಮೊತ್ತ ದಾಖಲಿಸಲು ಸಾಧ್ಯವಾಯಿತು.
ಬೃಹತ್ ಮೊತ್ತದ ರನ್ ಚೇಸಿಂಗ್ ನಲ್ಲಿ ಇಂಗ್ಲೆಂಡ್ ತಂಡದ ಮೇಲೆ ಭಾರತದ ಬೌಲರ್ ಗಳು ಆರಂಭದಲ್ಲಿ ನಿಯಂತ್ರಣ ಸಾಧಿಸಿದ್ದರು. ಆದರೆ ಜಾಕೋಬ್ ಬೆಥೆಲ್ ಅವರ ಆಕರ್ಷಕ ಚೊಚ್ಚಲ ಶತಕ (48ಎಸೆತಗಳಲ್ಲಿ 105) ದ ನೆರವಿನಿಂದ ಇಂಗ್ಲೆಂಡ್ ತಂಡ ಭಾರತಕ್ಕೆ ಪ್ರಬಲ ಪೈಪೋಟಿ ನೀಡಿತ್ತು. ಆದರೂ ಇಂಗ್ಲೆಂಡ್ ತಂಡದ ಉಳಿದ ಬ್ಯಾಟ್ಸ್ಮನ್ ಗಳ ವೈಫಲ್ಯದಿಂದಾಗಿ ಬೆಥೆಲ್ ಏಕಾಂಗಿ ಹೋರಾಟ ವ್ಯರ್ಥವಾಗಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಮಾತ್ರ ಗಳಿಸಿ ಸೋಲೊಪ್ಪಿಕೊಂಡಿತು.

