IMG_20260310_142639.jpg
Spread the love

ಕಾಪು: ದಿನಾಂಕ:10-03-2026(ಹಾಯ್ ಉಡುಪಿ ನ್ಯೂಸ್) ಕ್ಷುಲ್ಲಕ ಕಾರಣಕ್ಕಾಗಿ ವ್ರಧ್ಧೆಯೋರ್ವರ  ಕೊಲೆ ಮಾಡಿರುವ ಘಟನೆ ಮಣಿಪುರ ಗ್ರಾಮದ ಅರಬಿ ಕೆನರಾಡಿ ಎಂಬಲ್ಲಿ ಮಾ.9ರಂದು ರಾತ್ರಿ ವೇಳೆ ನಡೆದಿದೆ.

ಕೊಲೆಗೀಡಾದವರನ್ನು ಕೆನರಾಡಿಯ ವನಜಾ ಪೂಜಾರ್ತಿ (60) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಗಳಾದ ಸ್ಥಳೀಯ ನಿವಾಸಿಗಳಾದ ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ವಲೇರಿಯನ್ ಮೆಂಡೊನ್ಸಾ ಮತ್ತು ಪ್ರವೀಣ್ ಮೆಂಡೊನ್ಸಾ ಅಣ್ಣ–ತಮ್ಮಂದಿರ ಮಕ್ಕಳಾಗಿದ್ದು, ವನಜಾ ಪೂಜಾರ್ತಿ ಅವರೊಂದಿಗೆ ಆಗಾಗ್ಗೆ ವಲೇರಿಯನ್ ಮೆಂಡೊನ್ಸಾ ಅವರ ಮನೆಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು. ಮಾ.9ರಂದು ಸಂಜೆ ವೇಳೆ ಕ್ಷುಲ್ಲಕ ಕಾರಣಕ್ಕೆ ಇವರಿಬ್ಬರು ವನಜಾ ಪೂಜಾರ್ತಿ ಅವರನ್ನು ಹರಿತವಾದ ಆಯುಧದಿಂದ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ಈ ಘಟನೆ ಮಾ.10ರಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ಕಾಪು ವೃತ್ತ ಪೊಲೀಸ್ ನಿರೀಕ್ಷಕ ಅಜ್ಮತ್ ಅಲಿ, ಕಾಪು ಎಸ್ಸೈ ತೇಜಸ್ವಿ, ಮಣಿಪಾಲ ಕೆಎಂಸಿಯ ಫೋರೆನ್ಸಿಕ್ ವೈದ್ಯರು, ಸೊಕೋ ತಂಡ, ಶ್ವಾನ ದಳ ಹಾಗೂ ಫಿಂಗರ್ ಪ್ರಿಂಟ್ ವಿಭಾಗದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: No Copying!