IMG_20260311_195608.jpg
Spread the love

ದಿನಾಂಕ:11-03-2026 (ಹಾಯ್ ಉಡುಪಿ ನ್ಯೂಸ್)

ದುಬೈ: ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮುಂದುವರೆಸಿರುವ ಇರಾನ್ ಬುಧವಾರ ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್‌ಗಳನ್ನು ಸ್ಫೋಟಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಆದರೂ ವಿಮಾನ ಸಂಚಾರ ಎಂದಿನಂತೆ ಮುಂದುವರೆದಿದೆ ಎಂದು ದುಬೈ ಸರ್ಕಾರ ತಿಳಿಸಿದೆ.

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಎರಡು ಡ್ರೋನ್‌ಗಳು ಬಿದ್ದಿದ್ದು, ಘಟನೆಯಲ್ಲಿ ಘಾನಾದ ಇಬ್ಬರು ಪ್ರಜೆಗಳು ಮತ್ತು ಒಬ್ಬ ಬಾಂಗ್ಲಾದೇಶಿ ಪ್ರಜೆಗೆ ಗಂಭೀರ ಗಾಯಗಳಾಗಿವೆ ಮತ್ತು ಒಬ್ಬ ಭಾರತೀಯ ಪ್ರಜೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಅದಾಗ್ಯೂ ವಿಮಾನ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ ಎಂದು ದುಬೈ ಸರ್ಕಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

error: No Copying!