Screenshot_2026-03-18-15-29-06-612_com.whatsapp-edit.jpg
Spread the love

ಉಡುಪಿ: ದಿನಾಂಕ: 18-03-2026 (ಹಾಯ್ ಉಡುಪಿ ನ್ಯೂಸ್) ಕುಂದಾಪುರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಕಾರುಗಳ ಮಧ್ಯೆ ಸಂತೆಕಟ್ಟೆಯ‌ ಓವರ್ ಬ್ರಿಡ್ಜ್ ಬಳಿ ಇಂದು ಮಧ್ಯಾಹ್ನ  ಸಂಭವಿಸಿದ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ

ಕುಂದಾಪುರದಿಂದ ಉಡುಪಿ ಕಡೆ ಬರುತ್ತಿದ್ದ ಬೆಲೆನೊ ಕಾರು ಎದುರಿನಲ್ಲಿ ಹೋಗುತ್ತಿದ್ದ ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಉಡುಪಿಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಲೆನೊ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಕಾರಿನಲ್ಲಿದ್ದವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಕಾರಿಗೂ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. ಖಾಸಗಿ ‌ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: No Copying!