ದಿನಾಂಕ: 22-03-2026 (ಹಾಯ್ ಉಡುಪಿ ನ್ಯೂಸ್)
ಕೇರಳ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ (BJP)ಯ ಪ್ರಭಾವ ಹೆಚ್ಚುತ್ತಿದೆ ಎಂಬ ಮಾತನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಳ್ಳಿಹಾಕಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಸ್ಥಾನಗಳನ್ನು ಗೆಲ್ಲುವುದು ಅಸಾಧ್ಯವೆಂದು ಹೇಳಿದ್ದಾರೆ.
ಕೇರಳದಲ್ಲಿ ಬಿಜೆಪಿಯ ಪ್ರಭಾವವನ್ನು ಹೆಚ್ಚಿಸಲು ಕೆಲವು ಗುಂಪುಗಳು ಸಕ್ರಿಯವಾಗಿ ಕೆಲಸ ಮಾಡುತ್ತಿವೆ . ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಗೆದ್ದ ಮಾತ್ರಕ್ಕೆ ಇದನ್ನು ಕೇರಳದ ಜನತೆ ಸಂಪೂರ್ಣವಾಗಿ ಬಿಜೆಪಿಯನ್ನು ಒಪ್ಪಿಕೊಂಡಿದ್ದಾರೆ ಎಂದು ಅರ್ಥೈಸಬಾರದು ಎಂದರು.
ಬಿಜೆಪಿ ತಿರುವನಂತಪುರ ಮಹಾನಗರ ಪಾಲಿಕೆಯನ್ನು ಗೆದ್ದಿದೆ ಎಂದರೆ, ಕೇರಳದ ಸಂಪೂರ್ಣ ಜನಸಂಖ್ಯೆ ಆ ಪಕ್ಷವನ್ನು ಒಪ್ಪಿಕೊಂಡಿದೆ ಎಂದು ಅರ್ಥವಲ್ಲ ಎಂದು ಹೇಳಿದರು.
ಇದೇ ವೇಳೆ ಕೇರಳದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಪ್ರಭಾವವನ್ನೂ ತಳ್ಳಿಹಾಕಿದ್ದಾರೆ.
