kannadaprabha_2026-03-22_bkrbme7b_WhatsApp-Image-2026-03-22-at-11.10.43.jpg
Spread the love

ದಿನಾಂಕ: 22-03-2026 (ಹಾಯ್ ಉಡುಪಿ ನ್ಯೂಸ್)

ಬೆಂಗಳೂರು: ನಗರದ ಎಂಜಿ ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಗೆ ಪೊಲೀಸರು ಸಮನ್ಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರದ ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎ05 NR 0009 ನಂಬರಿನ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರ ಠಾಣೆಯ ಇನ್ಸ್ ಪೆಕ್ಟರ್ ರವಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ.

ಮೂಲಗಳ ಪ್ರಕಾರ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಡ್ರಿಫ್ಟಿಂಗ್‌ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಇದೇ ಕಾರಣಕ್ಕೆ ರಿಕ್ಕಿ ರೈಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಅಲ್ಲದೇ ಕಾರಿನ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂದು ಪರಿಶೀಲಿಸಲು ಆರ್‌ಟಿಒಗೂ ಪೊಲೀಸರು ಪತ್ರ ಬರೆದಿದ್ದಾರೆ.

ರಿಕ್ಕಿ ರೈ ಡ್ರಿಫ್ಟಿಂಗ್ ಮಾಡಿರೊ ಬಗ್ಗೆ ಸಿಸಿಟಿವಿಗಳ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಎರಡು ಮೂರು ಬಾರಿ ಕಾರ್ ಡ್ರಿಫ್ಟಿಂಗ್ ಮಾಡಲಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

error: No Copying!