IMG_20260323_134050.jpg
Spread the love

ದಿನಾಂಕ:23-03-2026(ಹಾಯ್ ಉಡುಪಿ ನ್ಯೂಸ್)

ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರವು ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಇಂದಿನಿಂದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ
ವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮುಂದೆ ಆರಂಭಿಸಿದ್ದಾರೆ.

ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಉಡುಪಿ ಬಡಾನಿಡಿಯೂರು ಗ್ರಾಮದ 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸುವ ಉದ್ದೇಶದಿಂದ ಜಾಗಕ್ಕೆ ಏಕ ವಿನ್ಯಾಸ ನಕ್ಷೆ ನೀಡುವಂತೆ  2024ರ ಮಾ.20ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದು ಅದಕ್ಕೆ ಈವರೆಗೆ ಅನುಮೋದನೆ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ಬೆಳಗ್ಗೆ 9:30ರಿಂದ ಧರಣಿ ಆರಂಭಿಸಿದ್ದಾರೆ.

ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಸಲಾಗುವುದು ,ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಬೇಕು ಇಲ್ಲವೇ ನೀಡಲು ಆಗುವುದಿಲ್ಲ ಎಂಬುದಾಗಿ ಹಿಂಬರಹ ನೀಡಬೇಕು. ಅಲ್ಲಿಯವರೆಗೆ ಧರಣಿ ಮುಂದುವರೆಸಲಾಗುವುದು ಹಿಂಬರಹ ನೀಡಿದರೆ ಅದರಂತೆ ಮುಂದೆ ಕಾನೂನು ಹೋರಾಟ ನಡೆಸಲಾಗುವುದು ಎಂದು ರಘುಪತಿ ಭಟ್ ಹೇಳಿದ್ದಾರೆ.

error: No Copying!