images-4.jpeg
Spread the love

ಮಲ್ಪೆ: ದಿನಾಂಕ :28-03-2026(ಹಾಯ್ ಉಡುಪಿ ನ್ಯೂಸ್) ಮಲ್ಪೆ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆಯೊಂದಕ್ಕೆ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನೀಲ್ ಕುಮಾರ್ ಡಿ ಅವರು ದಾಳಿ ನಡೆಸಿ ಮಟ್ಕಾ ದಂಧೆ ನಡೆಸುತ್ತಿದ್ದ ವ್ಯಕ್ತಿಯನ್ನು  ಬಂಧಿಸಿದ್ದಾರೆ.

ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನೀಲ್ ಕುಮಾರ್ ಡಿ, ಅವರು ದಿನಾಂಕ : 26-03-2026ರಂದು ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಕೂಡಲೇ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿ ಅಲ್ಲಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿದ್ದ ಆರೋಪಿತ ಸಂತೋಷ್ ಎಂಬವನನ್ನು ಬಂಧಿಸಿ ಅವನ ವಶದಲ್ಲಿದ್ದ ನಗದು ಹಣ ರೂಪಾಯಿ 530/-, ಮಟ್ಕಾ ಚೀಟಿ-1 ಮತ್ತು ಬಾಲ್‌ಪೆನ್‌‌-1 ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಆರೋಪಿತ ಸಂತೋಷ್ ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ  ಮಟ್ಕಾ ಜುಗಾರಿಯಿಂದ ಸಂಗ್ರಹಿಸಿದ ಹಣವನ್ನು ಉಡುಪಿಯ ಲಿಯೋ ಗೆ ನೀಡುತ್ತಿರುವುದಾಗಿ ತಿಳಿಸಿರುತ್ತಾನೆ.

ಆರೋಪಿತನಾದ ಸಂತೋಷ್‌ ಹಾಗೂ ಉಡುಪಿಯ ಲಿಯೋ ಇವರು ಸಂಘಟಿತರಾಗಿ ಅಕ್ರಮವಾಗಿ ಲಾಭಗಳಿಸುವ ಉದ್ದೇಶದಿಂದ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಕಲಂ:112 BNS & 78(I)(III) KP ACT ರಂತೆ ಪ್ರಕರಣ ದಾಖಲಾಗಿದೆ.

error: No Copying!