images-22.jpeg
Spread the love

ಕಾರ್ಕಳ: ದಿನಾಂಕ 29/03/2026 (ಹಾಯ್ ಉಡುಪಿ ನ್ಯೂಸ್) ಕರ್ತವ್ಯ ದಲ್ಲಿದ್ದ ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆ ಮಾಡಲು ಪ್ರಯತ್ನಿಸಿದ ಐವರನ್ನು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ ಎಸ್ ರವರು ಬಂಧಿಸಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಪ್ರಸನ್ನ ಎಂ ಎಸ್ ಅವರು ಮತ್ತು ಸಿಬ್ಬಂದಿಯವರು ದಿನಾಂಕ: 27-03-2026 ರಂದು ಕಾರ್ಕಳ ತಾಲೂಕು ಕಸಬಾ ಗ್ರಾಮದ ಹಂಚಿಕಟ್ಟೆ ಹೋಂಡಾ ಶೋರೂಮ್ ಬಳಿ ಬಂಗ್ಲೆಗುಡ್ಡೆ ವೃತ್ತದಿಂದ ಬರುತ್ತಿದ್ದ KA-15 Z-0007 ನೇ ನಂಬ್ರದ ಕಪ್ಪು ಬಣ್ಣದ ಫಾರ್ಚುನರ್ ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ .

ಕಾರನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ ಕಾರಿನಲ್ಲಿದ್ದ ಆಪಾದಿತರಾದ ಸುದರ್ಶನ್, ಕರ್ತವ್ಯ ಶೆಟ್ಟಿ, ಅರುಣ್ , ಶ್ರೀಕಾಂತ್ ಮತ್ತು ಶಶಿಕಾಂತ್ ಎಂಬವರು ಪ್ರಸನ್ನ ಎಂ ಎಸ್ ರವರು ಮತ್ತು ಸಿಬ್ಬಂದಿಯವರನ್ನು ಕೊಲ್ಲುವ ಉದ್ದೇಶದಿಂದ ಅವರ ಮೇಲೆ ಕಾರನ್ನು ಹತ್ತಿಸಲು ಪ್ರಯತ್ನಿಸಿ ಕೊಲೆ ಮಾಡಲು ಯತ್ನಿಸಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ  ಕಲಂ: 109, 132, ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿದೆ.

error: No Copying!